ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ನಿನ್ನೆಯೂ ರಾತ್ರಿಯಿಡೀ ಮಳೆ ಸುರಿದಿದೆ.
ನಿನ್ನೆ ರಾತ್ರಿ ಬೆಳ್ಳಂದೂರಿನ ಕರಿಯಮ್ಮನ ಅಗ್ರಹಾರದಲ್ಲಿ ರಾಜಕಾಲುವೆ ನೀರು ನುಗ್ಗಿದ್ದು, 50ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ.
ಎಲೆಕ್ಟ್ರಾನಿಕ್ ಸಿಟಿಯಿಂದ ಚಂದಾಪುರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ನಾಲ್ಕು ಕಿಮೀವರೆಗೂ ವಾಹನಗಳು ನಿಂತಿವೆ. ರಾತ್ರಿ ಸುರಿದ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ಏರ್‌ಪೋರ್ಟ್ ರಸ್ತೆಯ ಹೆಣ್ಣೂರು ಬಂಡೆ ಬಳಿ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಇದರಿಂದಾಗಿ ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯಲ್ಲಿ ಟ್ರಾಫಿಕ್ ಉಂಟಾಗಿದೆ.
ಬೆಂಗಳೂರಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ, ಇನ್ನು ಬೆಂಗಳೂರು ಗ್ರಾಮಾಂತರ,ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು, ಮೈಸೂರು, ರಾಮನಗರದಲ್ಲಿ ಹೆಚ್ಚು ಮಳೆಯಾಗಲಿದೆ.