ಕಾಸರಗೋಡು ಜಿಲ್ಲೆಯಲ್ಲಿ ಮುಂದುವರಿದ ಮಳೆ: ನಾಳೆಯೂ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಸರಗೋಡು ಜಿಲ್ಲೆಯಲ್ಲಿ ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಭಾರೀ ಮಳೆ ಮತ್ತು ಜಲಾವೃತ ಮತ್ತು ಭೂಕುಸಿತದಿಂದ ಹಲವು ಪ್ರದೇಶಗಳಲ್ಲಿ ಸಂಕಷ್ಟ ಎದುರಾಗಿದೆ.

ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿನಾಳೆ (06.07.2023, ಗುರುವಾರ) ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಇಂಪಾಶೇಖರ್ ಕೆ. ರಜೆ ಘೋಷಿಸಿದ್ದಾರೆ .

ಆದ್ರೆಪೂರ್ವನಿರ್ಧರಿತ ಪರೀಕ್ಷೆಗಳು ಮತ್ತು ಸಂದರ್ಶನಗಳು ಬದಲಾಗುವುದಿಲ್ಲ. ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಮೇಲಿನ ರಜೆಯಿಂದಾಗಿ ಕಳೆದುಹೋದ ಅಧ್ಯಯನದ ಸಮಯವನ್ನು ಸರಿಹೊಂದಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!