ಹೊಸದಿಗಂತ ವರದಿ ಕೊಡಗು:
ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರೆದಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ, ಕಾಲೇಜುಗಳಿಗೆ (ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ) ಘೋಷಿಸಿದ್ದ ರಜೆಯನ್ನು ಜು.25ರವೆಗೂ ವಿಸ್ತರಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.