ಜೆಡಿಎಸ್‌ನಲ್ಲಿ ಮುಂದುವರೆದ ರಾಜೀನಾಮೆ ಪರ್ವ: ಮುಸ್ಲಿಂ ಮುಖಂಡರಿಂದ ದಳಕ್ಕೆ ಗುಡ್‌ ಬೈ..

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿಜೆಪಿ ಜೊತೆ ಮೈತ್ರಿ ಬೆನ್ನಲ್ಲೇ ಜೆಡಿಎಸ್‌ ಪಕ್ಷದಲ್ಲಿ ರಾಜೀನಾಮೆ ಪರ್ವ ಮುಂದುವರೆದಿದೆ. ಮೈತ್ರಿಗೆ ಅಸಮಾಧಾನ ಹೊರಹಾಕಿರುವ ಮುಸ್ಲಿಂ ಮುಖಂಡರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ನಿನ್ನೆ, ಜೆಡಿಎಸ್‌ ವರಿಷ್ಠ ದೇವೇಗೌಡರು ಈ ಮೈತ್ರಿಯಿಂದ ಅಲ್ಪಸಂಖ್ಯಾತ ಸಮುದಾಯಕ್ಕೆ ಯಾವುದೇ ರೀತಿ ತೊಂದರೆಯಾಗುವುದಿಲ್ಲ ಎಂಬ ಭರವಸೆ ಕೊಟ್ಟ ಬಳಿಕವೂ ಅಸಮಾಧಾನ ಹೊರಹಾಕಿದ್ದು, ಮೈಸೂರಿನಲ್ಲಿ ಮುಸ್ಲಿಂ ಮುಖಂಡರು ಸಾಮೂಹಿಕ ರಾಜೀನಾಮೆ ಘೋಷಿಸಿದರು.

ಎನ್​ಆರ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾಹಿದ್ ನೇತೃತ್ವದಲ್ಲಿ ಮುಸ್ಲಿಂ ಮುಖಂಡರು ಜೆಡಿಎಸ್​ಗೆ ಬಾಯ್‌ ಬಾಯ್‌ ಹೇಳಿದ್ದು, ರಾಜೀನಾಮೆ ಪತ್ರವನ್ನು ಅಂಚೆ ಮೂಲಕ ರಾಜ್ಯಾಧ್ಯಕ್ಷರಿಗೆ ರವಾನಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!