ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಒಣಹವೆ ಮುಂದುವರಿಯಲಿದೆ. ಕರಾವಳಿ ಭಾಗದಲ್ಲಿ ಹೆಚ್ಚಿನ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿಯಲ್ಲಿ ದಾಖಲೆ ಪ್ರಮಾಣದ ಗರಿಷ್ಠ ತಾಪಮಾನ ಏರಿಕೆಯಾಗಿದೆ. ಇಂದು ಕರಾವಳಿಗೆ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿದೆ. ಕಾರವಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಾಡಿಕೆಗಿಂತ ನಾಲ್ಕೈದು ಡಿಗ್ರಿ ಗರಿಷ್ಠ ತಾಪಮಾನ ಏರಿಕೆಯಾಗಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.