Wednesday, August 10, 2022

Latest Posts

ಕಾನ್ಪುರದಲ್ಲಿ ಮುಂದುವರಿದ ಝಿಕಾ ಆತಂಕ: ಮತ್ತೆ 30 ಮಂದಿಗೆ ಸೋಂಕು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಉತ್ತರಪ್ರದೇಶದ ಕಾನ್ಪುರದಲ್ಲಿ ದಿನದಿಂದ ದಿನಕ್ಕೆ ಝಿಕಾ ಸೋಂಕಿತರ ಸಂಖ್ಯೆ ಹೆಚ್ಚುತ್ತದೆ. ಗುರುವಾರ ಹೊಸದಾಗಿ 30 ಜನರಿಗೆ ಸೋಂಕು ತಗುಲಿದ್ದು, ಈ ಮೂಲಕ ಝಿಕಾ ಸೋಂಕಿತರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ.

ಮೊನ್ನೆಯಷ್ಟೇ ವಾಯುಪಡೆಯ 6 ಸಿಬ್ಬಂದಿ ಸೇರಿ 25 ಮಂದಿಯಲ್ಲಿ ಝಿಕಾ ವೈರಸ್ ಸೋಂಕು ಪತ್ತೆಯಾಗಿತ್ತು. ಇದೀಗ ಮತ್ತೆ ಹೊಸದಾಗಿ 30 ಮಂದಿಗೆ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.

ಜಿಲ್ಲಾಧಿಕಾರಿ ಜಿ.ವಿಶಾಖ್ ಈ ಕುರಿತಂತೆ ಹೇಳಿಕೆ ನೀಡಿದ್ದು, ಝಿಕಾ ಸೋಂಕು ಹರಡುವುದನ್ನು ತಡೆಯಲು ಮತ್ತು ಅದರ ಮೂಲವನ್ನು ಪತ್ತೆಹಚ್ಚಲು ಈಗಾಗಲೇ ಆರೋಗ್ಯ ತಂಡವನ್ನು ರಚಿಸಲಾಗಿದೆ. ಸೊಳ್ಳೆ ನಿಯಂತ್ರಣಕ್ಕೆ ಬೇಕಾದ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಝಿಕಾ ಮಟ್ಟಹಾಕಲು ಆರೋಗ್ಯ ಇಲಾಖೆ ಮುಂದಾಗಿದ್ದು, ಮನೆಮನೆಯಿಂದ ರಕ್ತ ಮಾದರಿ ಸಂಗ್ರಹಿಸಲು ನಿರ್ಧರಿಸಿದೆ. ಝಿಕಾ ಸೋಂಕಿನ ಬಗ್ಗೆ ಯಾರೂ ಗಾಬರಿಯಾಗದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಗರ್ಭಿಣಿಯರು ಮತ್ತು ಜ್ವರ ಪೀಡಿತರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss