Friday, July 1, 2022

Latest Posts

ಜಿಲ್ಲೆಯಲ್ಲಿ ಮೊಬೈಲ್ ನೆಟ್‌ವರ್ಕ್ ವ್ಯವಸ್ಥೆಗಾಗಿ ಕಂಪನಿಗಳ ವ್ಯವಸ್ಥಾಪಕರೊಂದಿಗೆ ನಿರಂತರ ಸಮಾಲೋಚನೆ: ಜಿಲ್ಲಾಧಿಕಾರಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………

ಹೊಸ ದಿಗಂತ ವರದಿ,ಶಿವಮೊಗ್ಗ:

ಜಿಲ್ಲೆಯಲ್ಲಿ ಮೊಬೈಲ್ ನೆಟ್‌ವರ್ಕ್ ವ್ಯವಸ್ಥೆಯಲ್ಲಿ ಇನ್ನಷ್ಟು ಸುಧಾರಣಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ವಿವಿಧ ವೆಬೈಲ್ ಕಂಪನಿಗಳ ವ್ಯವಸ್ಥಾಪಕರೊಂದಿಗೆ ನಿರಂತರವಾಗಿ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮೊಬೈಲ್ ನೆಟ್‌ವರ್ಕ್ ಹಾಗೂ ಇಂಟರ್‌ನೆಟ್ ಸೇವೆ ಒದಗಿಸುತ್ತಿರುವ ಜಿಲ್ಲೆಯ ವಿವಿಧ ಕಂಪನಿಗಳ ವ್ಯವಸ್ಥಾಪಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ವಿವಿಧ ಮೊಬೈಲ್ ಕಂಪನಿಗಳಿಗೆ ತಾಲೂಕುಗಳನ್ನು ಹಂಚಿಕೆ ಮಾಡಿ, ಟವರ್‌ಗಳನ್ನು ನಿರ್ಮಿಸಿ, ಉತ್ತಮ ಸೇವೆ ಒದಗಿಸುವಂತೆ ಸೂಚಿಸಲಾಗಿದೆ ಎಂದರು.
ಮಲೆನಾಡು ಭಾಗ ಸೇರಿದಂತೆ ವಿವಿಧ ತಾಲೂಕುಗಳಲ್ಲಿ  ಉತ್ತಮ ಸೇವೆ ಒದಗಿಸಲು ಟವರ್‌ಗಳನ್ನು ನಿರ್ಮಿಸುವ ಸಂಬಂಧ ಎದುರಾಗಿರುವ ತಾಂತ್ರಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳ ಇತ್ಯರ್ಥಕ್ಕೆ ಆಯಾ ವಿಭಾಗದ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಲಾಗಿದೆ ಎಂದರು.
ಸಭೆಯಲ್ಲಿ ಬಿಎಸ್‌ಎನ್‌ಎಲ್, ಜಿಯೋ ಸೇರಿದಂತೆ ಎಲ್ಲಾ ವೊಬೈಲ್ ಕಂಪನಿಗಳ ವ್ಯವಸ್ಥಾಪಕರು, ಕಂಪನಿಗಳ ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss