ವಿದ್ಯಾರ್ಥಿನಿ ಮೇಲೆ ನಿರಂತರ ಗ್ಯಾಂಗ್ ರೇಪ್: ಆರು ಮಂದಿ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

19 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಅಪ್ರಾಪ್ತ ಬಾಲಕ(?) ಸೇರಿ 6 ಮಂದಿ ಹಲವು ದಿನಗಳ ಕಾಲ ಅತ್ಯಾಚಾರವೆಸಗಿದ್ದು, ಈ ಕೃತ್ಯವನ್ನು ವಿಡಿಯೋ ಮಾಡಿಕೊಂಡಿರುವ ಘಟನೆ ಒಡಿಶಾದ ಕಟಕ್ ಜಿಲ್ಲೆಯಲ್ಲಿ ವರದಿಯಾಗಿದೆ.

ಘಟನೆ ಸಂಬಂಧ ಅಪ್ರಾಪ್ತ ಎಂದು ಹೇಳಲಾಗುತ್ತಿರುವ ಓರ್ವನನ್ನು ಸೇರಿ 6 ಮಂದಿಯನ್ನು ಬಂಧಿಸಲಾಗಿದೆ. ತನ್ನ ಪ್ರಿಯಕರ ಸೇರಿದಂತೆ ಆರೋಪಿಗಳು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿ ಕಟಕ್‌ನ ಬಾದಂಬಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತನ್ನ ಹುಟ್ಟುಹಬ್ಬವನ್ನು ಆಚರಿಸಲು ದಸರಾ ಹಬ್ಬದ ಸಂದರ್ಭದಲ್ಲಿ ನಗರದ ಪುರಿಘಾಟ್ ಪೊಲೀಸ್ ಠಾಣಾ ವ್ಯಾಪ್ತಿಯ ಕೆಫೆಗೆ ಹೋಗಿದ್ದಾಗಿ ಕಾಲೇಜು ವಿದ್ಯಾರ್ಥಿನಿ ತಿಳಿಸಿದ್ದಾಳೆ. ಈ ಸಂದರ್ಭದಲ್ಲಿ ಆಕೆಯ ಗೆಳೆಯ, ಕೆಫೆ ಮಾಲೀಕರ ಸಹಾಯದಿಂದ ಅವರ ಕೆಲವು ಅಶ್ಲೀಲ ಕೃತ್ಯಗಳನ್ನು ತನ್ನ ಫೋನ್‌ನಲ್ಲಿ ಸೆರೆಹಿಡಿದಿದ್ದಾನೆ. ಅವರು ಮಹಿಳೆಯ ಆಪ್ತ ವೀಡಿಯೊಗಳನ್ನು ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಮತ್ತು ಹಲವಾರು ಬಾರಿ ಅತ್ಯಾಚಾರ ಮಾಡಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪಿಸಿರುವುದಾಗಿ ಅಧಿಕಾರಿ ಹೇಳಿದ್ದಾರೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!