ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಧಿವೇಶನದ ಮೊದಲ ದಿನ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿದೆ. ಮತ್ತೊಂದು ಕಡೆ ಅವರಿಂದಲೇ ಸರ್ಕಾರಕ್ಕೆ ಮೆಚ್ಚುಗೆ ಹೇಳುವ ಮಾತನ್ನು ಆಡಿಸಲಾಗುತ್ತಿದೆ ಎಂದರು.
ಜನರ ಮೇಲೆ ತೆರಿಗೆ ಹೊರೆ ಹೇರಲಾಗುತ್ತಿದೆ. ಇದನ್ನು ಖಂಡಿಸಿ ಮಾ.7 ರಂದು ಶಾಸಕರ ಭವನದಿಂದ ವಿಧಾನಸೌಧಕ್ಕೆ ಪಾದಯಾತ್ರೆ ಹಾಗೂ ಪ್ರತಿಭಟನೆ ಮಾಡಲಾಗುವುದು ಎಂದು ಅಶೋಕ್ ಹೇಳಿದ್ದಾರೆ.