ರಾಷ್ಟ್ರ ರಾಜಧಾನಿಯಲ್ಲಿ ನಿರಂತರ ಮಳೆ: ನಾಳೆ ಶಾಲೆಗಳಿಗೆ ರಜೆ ಘೋಷಿಸಿದ ಸಿಎಂ ಕೇಜ್ರಿವಾಲ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು,ಈ ಹಿನ್ನೆಲೆ ಎಲ್ಲಾ ಶಾಲೆಗಳಿಗೆ ಸೋಮವಾರ ರಜೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಭಾನುವಾರ ಘೋಷಿಸಿದ್ದಾರೆ.

ಇಂದು ಬೆಳಿಗ್ಗೆಯಿಂದ ದೆಹಲಿಯಲ್ಲಿ ಮಳೆಯ (Delhi Rain) ಪ್ರಮಾಣ ಹೆಚ್ಚಾಗತೊಡಗಿದ್ದು, ದೆಹಲಿಯ ಹಲವು ಭಾಗಗಳಲ್ಲಿ ರಸ್ತೆಗಳು ಜಾಲವೃತವಾಗಿದೆ. ಸದ್ಯ ನಾಳೆ ಸಹ ದೆಹಲಿಯಲ್ಲಿ ಮಳೆ ಮುಂದುವರಿಯುವ ಸಂಭವವಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇದು 1982 ರಿಂದ ಇಲ್ಲಿಯವರೆಗೆ ಜುಲೈ ತಿಂಗಳಲ್ಲಿ ಒಂದೇ ದಿನದಲ್ಲಾದ ಅತಿ ಹೆಚ್ಚು ಮಳೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!