ನಿರಂತರ ಮಳೆ: ಸಕಲೇಶಪುರ-ಹಾಸನ ಸಂಚಾರ ನಿಷೇಧ

ಹೊಸದಿಗಂತ ವರದಿ, ಹಾಸನ:

ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಹಲವೆಡೆ ಗುಡ್ಡ, ತಡೆಗೋಡೆ ಕುಸಿತ ಸಂಭವಿಸುತ್ತಿವೆ. ಈ ಹಿನ್ನೆಲೆ ತುರ್ತು ದುರಸ್ತಿ ಕಾರ್ಯ ನಡೆಸಬೇಕಿದ್ದು, ಹಾಸನದಿಂದ ಮಾತನಹಳ್ಳಿ ವರೆಗೆ ತುರ್ತು ವಾಹನಗಳನ್ನು ಹೊರತುಪಡಿಸಿ ಉಳಿದೆಲ್ಲ ಮಾದರೊಯ ವಾಹನಗಳ ಸಂಚಾರ ಇಂದಿನಿಂದ ನಿಷೇಧಿಸಲಾಗಿದೆ.

ಈ ಬಗ್ಗೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅವರು ಗುರುವಾರ ಸಂಜೆ ಆದೇಶ ಹೊರಡಿಸಿದ್ದು, ಜು.18 ರ ಶುಕ್ರವಾರ ಬೆಳಗ್ಗೆಯಿಂದ ದುರಸ್ತಿ ಕಾರ್ಯಗಳು ಮುಗಿಯುವ ವರೆಗೂ ಮುನ್ನೆಚ್ಚರಿಕೆ ಕ್ರಮ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆ ಮಾರ್ಗವಾಗಿ ಬೆಂಗಳೂರು-ಮಂಗಳೂರು ನೆಉವೆ ಪ್ರಯಾಣಿಸುವ ವಾಹನಗಳು ಹಾಸನ, ಬೇಲೂರು, ಮೂಡಿಗೆರೆ, ಚಾರ್ಮಡಿ ಮಾರ್ಗವಾಗಿ ಸಂಚರಿಸಬೇಕು ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!