ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆಯಿಂದಾಗಿ ಹಲವೆಡೆ ಭಾರೀ ಹಾನಿ ಸಂಭವಿಸಿದ್ದು, ಕಳೆದ ಎರಡು ದಿನಗಳಲ್ಲಿ 41 ಮಂದಿ ಸಾವನ್ನಪ್ಪಿದ್ದಾರೆ.
ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿದೆ. 20 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮತ್ತಷ್ಟು ಜನ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯ ಮುಂದುವರಿದೆ. ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದ ಅರ್ಧಕುವರಿಯಲ್ಲಿರುವ ಇಂದರ್ಪ್ರಸ್ಥ ಭೋಜನಾಲಯದ ಬಳಿ ಭೂ ಕುಸಿತ ಸಂಭವಿಸಿತ್ತು. ದೋಡಾ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿ ನಾಲ್ವರು ಮೃತರಾಗಿದ್ದಾರೆ.