ಹೊಸದಿಗಂತ ವರದಿ ಯಾದಗಿರಿ:
ಮಹಾರಾಷ್ಟ್ರದಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ನಗರದ ಹೊರ ವಲಯದ ಭೀಮಾನದಿಗೆ ಗಣನೀಯ ಪ್ರಮಾಣದಲ್ಲಿ ಒಳಹರಿವು ಹೆಚ್ಚಾಗಿದೆ.
ಸನ್ನತಿ ಬ್ಯಾರೇಜ್ ನಿಂದ ಭೀಮಾನದಿಗೆ ಅಪಾರ ಪ್ರಮಾಣದ ನೀರು ರಿಲೀಸ್ ಮಾಡಲಾಗುತ್ತಿದ್ದು, ಗುರುಸಣಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿಂದ 5 ಸಾವಿರ ಕ್ಯೂಸೆಕ್ ನೀರು ಹರಿದು ಬಂದಿದೆ. ಒಂದು ಗೇಟ್ ಓಪನ್ ಮಾಡಿ ಬ್ರಿಡ್ಜ್ ಕಂ ಬ್ಯಾರೇಜ್ ನೀರು ಬಿಡುಗಡೆ ಮಾಡಲಾಗಿದೆ.
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಯಲ್ಲಿ ಯುವಕರ ಹುಚ್ಚಾಟ ನಡೆಸಿದ್ದು ಜಿಲ್ಲಾಡಳಿತ ಆದೇಶಕ್ಕೂ ಯುವಕರ ಡೊಂಟ್ ಕೇರ್ ಎಂದಿದ್ದಾರೆ.
ರಭಸವಾಗಿ ಹರಿಯುತ್ತಿರುವ ನದಿಯಲ್ಲಿ ಮೀನು ಹಿಡಿಯುತ್ತಿದ್ದಾರೆ.