ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ವಿಶ್ವವಿಖ್ಯಾತ ಜೋಗ ಜಲಪಾತ ಸೌಂದರ್ಯ ಕಂಡು ಪ್ರವಾಸಿಗರು ಮನಸೋತಿದ್ದಾರೆ.
ನಿರಂತರ ಮಳೆಯಿಂದಾಗಿ ಲಿಂಗನಮಕ್ಕಿ ಜಲಾಶಯದ ಮೂಲಕ ಶರಾವತಿ ನದಿಗೆ ನೀರು ಹರಿದುಬಂದಿದ್ದು, ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.
ಜಲಪಾತದ ರಾಜ, ರಾಣಿ, ರೋರರ್ ಹಾಗೂ ರಾಕೆಟ್ ಜಲಧಾರೆಗಳು ಭೋರ್ಗರೆಯುತ್ತಿದ್ದು, ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ ಆಗಿದ್ದಾರೆ.