ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕೋಪಯೋಗಿ ಇಲಾಖೆಯಲ್ಲೇ ಗುತ್ತಿಗೆದಾರರೊಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ರಸ್ತೆ ನಿರ್ವಹಣೆಯ ಬಿಲ್ ಮಂಜೂರು ಮಾಡದ ಹಿನ್ನೆಲೆಯಲ್ಲಿ ಗುತ್ತಿಗೆದಾರ ನಾಗಪ್ಪ ಬಂಗಿ ಎಂಬುವರು ಲೋಕೋಪಯೋಗಿ ಇಲಾಖೆಯ ಎಕ್ಸಿಕ್ಯುಟಿವ್ ಇಂಜಿನಿಯರ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಬೆಳಗಾವಿಯ ಕೋಟೆ ಆವರಣದಲ್ಲಿರುವ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ನಾಗಪ್ಪ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.