ಗುತ್ತಿಗೆದಾರ ಸಚಿನ್ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಹೊಸ ದಿಗಂತ ವರದಿ, ಕಲಬುರಗಿ:

ಆತ್ಮಹತ್ಯೆ ಮಾಡಿಕೊಂಡ ಬೀದರ್ ಜಿಲ್ಲೆಯ ಯುವಕ ಸಚಿನ್ ಪಾಂಚಾಳರ ಸಾವು ದುರದೃಷ್ಟಕರವಾದುದು. ಸಚಿನ್ ಆತ್ಮಕ್ಕೆ ಶಾಂತಿ ದೊರಕಲಿ,ಅವರ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಆಶಿಸುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ,ಈ ಪ್ರಕರಣದಲ್ಲಿ ಹೆಸರಿಸಿರುವ ಆರೋಪಿಗಳ ಹೇಳಿಕೆಗಳು ಒಂದು ಬಗೆಯಲ್ಲಿವೆ, ಸಚಿನ್ ಬರೆದಿದ್ದೆನ್ನಲಾಗಿರುವ ಡೆತ್ ನೋಟ್ ನಲ್ಲಿ ಇನ್ನೊಂದು ಬಗೆಯ ವಿಷಯಗಳು ಕಂಡು ಬರುತ್ತವೆ. ಈಗಾಗಲೇ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂದಿದ್ದಾರೆ, ಈ ಪ್ರಕರಣದ ಸತ್ಯಾಸತ್ಯತೆಯನ್ನು ಹೊರತರುವಲ್ಲಿ ತನಿಖಾ ಸಂಸ್ಥೆಗಳು ಪರಿಣಾಮಕಾರಿಯಾಗಿ ತನಿಖೆ ಮಾಡಲಿದ್ದಾರೆ ಎಂದರು.

ಮಿಥ್ಯಾರೋಪ ಮಾಡುವುದು ಬಿಜೆಪಿಯವರ ಹಳೆಯ ಅಭ್ಯಾಸ. ಈ ಹಿಂದೆಯೂ ನನ್ನ ಮೇಲೆ ನಿರಾಧರ ಆರೋಪ ಮಾಡಿದ್ದರು, ಈಗಲೂ ಮಾಡುತ್ತಿದ್ದಾರೆ, ಮುಂದೆಯೂ ಮಾಡುತ್ತಿರುತ್ತಾರೆ.
ಬಿಜೆಪಿಯವರು ಅ ಪ್ರಯತ್ನ ಮುಂದುವರೆಸುತ್ತಲೇ ಇರಲಿ. ಆದರೆ ಆಧಾರ ರಹಿತ ಆರೋಪಗಳಿಂದ ನನ್ನನ್ನು ಕುಗ್ಗಿಸುವ ಬಿಜೆಪಿಯವರ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!