ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಬಿಜೆಪಿ ಬೃಹತ್ ಪ್ರತಿಭಟನೆ, ‘ಕೈ’ ಕಾರ್ಯಕರ್ತರಿಂದ ಪಾನಿಯ ವ್ಯವಸ್ಥೆ

ಹೊಸದಿಗಂತ ಕಲಬುರಗಿ:

ಬೀದರ್ ಜಿಲ್ಲೆಯ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ ಖಂಡಿಸಿ, ಬಿಜೆಪಿ ಪಕ್ಷದಿಂದ ಬೃಹತ್ ಪ್ರತಿಭಟನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿ ಮನೆಗೆ ಮುತ್ತಿಗೆ ಹಮ್ಮಿಕೊಂಡಿದ್ದು, ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನಾಕಾರರಿಗೆ ತಂಪು ಪಾನೀಯ ವ್ಯವಸ್ಥೆ ಮಾಡಲಾಗಿದೆ.

ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಬಿಜೆಪಿ ರಾಜ್ಯ ನಾಯಕರು ಹಾಗೂ ಜಿಲ್ಲೆಯ ಮುಖಂಡರಿಂದ ಬೃಹತ್ ಪ್ರತಿಭಟನೆ ನಡೆಯಲಿದ್ದು, ಮುತ್ತಿಗೆ ಹಾಕಲು ಬರುವ ಬಿಜೆಪಿ ಕಾರ್ಯಕರ್ತರಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರ ಮನೆಯಲ್ಲಿ ತಂಪು ಪಾನೀಯ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರ ಮನೆಗೆ ಬರುವ ಬಿಜೆಪಿ ಕಾರ್ಯಕರ್ತರಿಗೆ ಪ್ರಿಯಾಂಕ್ ಖರ್ಗೆ ಅಭಿಮಾನಿಗಳ ಬಳಗದಿಂದ ಅವರ ಮನೆಯಲ್ಲಿ ಈಗಾಗಲೇ ಕಾಫಿ,ಟೀ,ಎಳೆ ನೀರು, ನೀರಿನ ವ್ಯವಸ್ಥೆ ಮಾಡುವ ಮೂಲಕ ಬಿಜೆಪಿಯ ಗುಂಡಾಗಿರಿಗೆ ನಮ್ಮ ಗಾಂಧಿಗಿರಿ ಬ್ಯಾನರ್ ಹಾಕಿ ಕಾಂಗ್ರೆಸ್ ಕಾರ್ಯಕರ್ತರು ಕೌಂಟರ್ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಭಾಗಿಯಾಗುವ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರಿಗೆ ೫೦ಕ್ಕೂ ಹೆಚ್ಚು ಎಳನೀರು ತಂದು ಇಡಲಾಗಿದೆ.ಬಿಜೆಪಿ ನಾಯಕರು ಮನೆ ಬಳಿ ಬರಲು ಅವಕಾಶ ನೀಡುವುದು ಡೌಟ್ ಆಗಿದ್ದು, ನಗರದ ವಿವಿಧ ಕಡೆಗಳಲ್ಲಿ ಪೋಲಿಸರ ಬಿಗಿ ಬಂದೋಬಸ್ತ್ ಮಾಡಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!