ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೀದರ್ ನಲ್ಲಿ ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬರಗಿಯಲ್ಲಿ ನಾಲ್ವರು ಆರೋಪಿಗಳ ಮನೆ ಮೇಲೆ ಸಿಐಡಿ ದಾಳಿ ನಡೆಸಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಸಹಾಯಕ ರಾಜು ಕಪನೂರ ಸೇರಿದಂತೆ ನಾಲ್ವರು ಆರೋಪಿಗಳ ಮನೆಗಳಲ್ಲಿ ಶೋಧ ನಡೆಸಿ ಪರಿಶೀಲನೆ ನಡೆಸಲಾಗಿದೆ.
ಕಲಬುರ್ಗಿ ಕೈಗಾರಿಕಾ ಪ್ರದೇಶದಲ್ಲಿ ರಾಜು ಕಪನೂರ ನಿವಾಸ, ಕಲಬುರ್ಗಿಯ ಘಾಟೆ ಬಡಾವಣೆಯ ಗೋರಖ್ ನಾಥ, ಗಂಜ್ ಪ್ರದೇಶದಲ್ಲಿ ನಂದಕುಮಾರ್ ಮನೆ ಸೇರಿ ಸಿಐಡಿ ತಂಡ ನಾಲ್ಕು ಸ್ಥಳಗಳಲ್ಲಿ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದೆ.