ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೀದರ್‌ನ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿದಂತೆ 6 ಜನರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಪ್ರಕರಣ ಸಂಬಂಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸರು ನ್ಯಾಯಾಲಯದ ಗಮನಕ್ಕೆ ತಂದು ಎಫ್‍ಐಆರ್ ದಾಖಲಿಸಿದ್ದಾರೆ. ಬಿಎನ್‍ಎಸ್ 351(2) ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮುನ್ನ ಬರೆದ ಡೆತ್ ನೋಟ್ ರಾಜ್ಯ ರಾಜಕೀಯದಲ್ಲಿ ಕಿಚ್ಚು ಹಚ್ಚಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಲು ಬಿಜೆಪಿ ಹೋರಾಟಕ್ಕೆ ಮುಂದಾಗಿದೆ.
ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್‍ನಲ್ಲಿ ನನ್ನ ಸಾವಿಗೆ ಕಾಂಗ್ರೆಸ್ ಮುಖಂಡ ರಾಜು ಕಪನೂರ್ ಮತ್ತು ಗ್ಯಾಂಗ್ ಕಾರಣ ಎಂದು ಉಲ್ಲೇಖಿಸಲಾಗಿದೆ.