ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆತ್ಮಹತ್ಯೆ ನೀತಿ ಜಾರಿಗೆ ತಂದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಹಲವಾರು ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆಯನ್ನು ಕಾಂಗ್ರೆಸ್ ಸರಕಾರದ ಪ್ರಾಯೋಜಿತ ಕೊಲೆ ಎಂದು ಬಿಜೆಪಿ ಖಂಡಿಸಿದೆ.
ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಬರೆದಿಟ್ಟರೂ ಪ್ರಿಯಾಂಕ್ ಖರ್ಗೆ ಅವರ ಆಪ್ತ, ಕೊಲೆಗಾರ ರಾಜು ಕಪನೂರನ್ನು ಬಂಧಿಸದಿರುವುದು ಈ ಕೊಲೆಯಲ್ಲಿ ಕಾಂಗ್ರೆಸ್ ಸರ್ಕಾರ ಭಾಗಿಯಾಗಿದೆ ಎಂಬುದಕ್ಕೆ ಸಾಕ್ಷಿ ಎಂದು ಕಿಡಿಕಾರಿದೆ.
ಸಿಎಂ ಸಿದ್ದರಾಮಯ್ಯ ಕೂಡಲೇ ಪ್ರಿಯಾಂಕ್ ಖರ್ಗೆ ಅವರನ್ನು ಸಂಪುಟದಿಂದ ವಜಾಗೊಳಿಸಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಸಚಿನ್ ಆತ್ಮಹತ್ಯೆಗೆ ಕಾರಣರಾದ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿದ್ದು, ಸಚಿನ್ ಸಾವಿಗೆ ನ್ಯಾಯ ಸಿಗುವವರೆಗೂ ರಾಜ್ಯಾದ್ಯಂತ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.