ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಕೆ.ಎಸ್.ಈಶ್ವರಪ್ಪಗೆ ಬಿಗ್ ರಿಲೀಫ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗುತ್ತಿಗೆದಾರ ಸಂತೋಷ್ (Contractor Santosh) ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಅವರಿಗೆ ರಿಲೀಫ್ ಸಿಕ್ಕಿದೆ.

ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್ (B Report) ಅಂಗೀಕರಿಸಿದೆ.

ಪ್ರಕರಣದ ತನಿಖೆ ನಡೆಸಿದ್ದ ಉಡುಪಿ ಪೊಲೀಸರು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಬಿ ರಿಪೋರ್ಟ್​​ ಸಲ್ಲಿಕೆ ಮಾಡಿದ್ದರು.

ಈ ಬಿ ರಿಪೋರ್ಟ್ ಸಲ್ಲಿಕೆಯನ್ನು ಪ್ರಶ್ನಿಸಿ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​ ವಾದ-ಪ್ರತಿವಾದ ಆಲಿಸಿ ಇಂದು (ಜು.15) ಬಿ ರಿಪೋರ್ಟ್ ಅಂಗೀಕರಿಸಿದೆ.

ಗುತ್ತಿಗೆದಾರ ಸಂತೋಷ್​ ಆತ್ಮಹತ್ಯೆ
ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆ.ಎಸ್‌. ಈಶ್ವರಪ್ಪ ಅವರು ಗ್ರಾಮೀಣ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸಚಿವರಾಗಿದ್ದಾಗ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ 2022ರ ಏಪ್ರಿಲ್ 12 ರಂದು ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಕಮೀಷನ್‌ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕೆಎಸ್​​ ಈಶ್ವರಪ್ಪ ಅವರ ವಿರುದ್ಧ ಆರೋಪ ಕೇಳಿಬಂದಿತ್ತು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಬಳಿಕ ಕೆಎಸ್​ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here