ಹೊಸ ದಿಗಂತ ವರದಿ, ಮಂಡ್ಯ:
ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧೀಜಿ ಸ್ಮರಣೆ ಮಾಡುತ್ತಿದೆ. ಇನ್ನೊಂದೆಡೆ ಬೀದರ್ ನಲ್ಲಿ ಯುವ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಅರಾಜಕತೆಗೆ ಸಾಕ್ಷಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದರು.
ಮಂಡ್ಯದಲ್ಲಿ ದಿಶಾ ಸಭೆಯ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.
ಪ್ರಿಯಾಂಕ್ ಖರ್ಗೆ ಅವರು ಪ್ರತಿಯೊಂದು ವಿಚಾರದಲ್ಲಿ ರಾಜ್ಯದಲ್ಲಿ ನನ್ನನ್ನು ಬಿಟ್ಟರೆ ಸಚ್ಚಾರಿತ್ರ್ಯ ಇರುವ ವ್ಯಕ್ತಿ ಬೇರೆ ಇಲ್ಲ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಈಗ ನೋಡಿದರೆ ಅವರ ಆಪ್ತ ಸಹಾಯಕನ ಹೆಸರೇ ಬಂದಿದೆ. ಈ ಸರಕಾರ ಈಗಾಗಲೇ ಗುತ್ತಿಗೆದಾರರ ವಿಷಯದಲ್ಲಿ ಚೆಲ್ಲಾಟ ಆಡಿದೆ. ಈಗಲೂ ಅದನ್ನೇ ಮುಂದುವರಿಸುತ್ತಿದೆ ಎಂದು ಕೇಂದ್ರ ಸಚಿವರು ಕಿಡಿಕಾರಿದರು.