ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುತ್ತಿಗೆದಾರರು ಬಾಕಿ ಬಿಲ್ ಪಾವತಿಗೆ ಪಟ್ಟು ಹಿಡಿದ್ದಿದ್ದು, ಆದ್ರೆ ರಾಜ್ಯ ಕಾಂಗ್ರೆಸ್ ಸರ್ಕಾರ ತನಿಖೆಗೆ ಮುಂದಾಗಿದೆ.
ಸರ್ಕಾರದ ವಿರುದ್ಧವೇ ಕಮಿಷ್ ಆರೋಪ ಕೇಳಿಬಂದಿದ್ದು, ಹೀಗಾಗಿ ತನಿಖೆ ನಂತರವೇ ಬಾಕಿ ಬಿಲ್ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬೆಂಗಳೂರಿನಲ್ಲಿ ಕಾಮಗಾರಿಗಳ ಕುರಿತು ನಾಲ್ಕು ತಂಡ ರಚಿಸಿ ತನಿಖೆ ಮಾಡಿಸುತ್ತಿದ್ದೇವೆ. ಗುಣಮಟ್ಟದ ಕಾಮಗಾರಿಗೆ ಆಗಿದೆಯಾ ಇಲ್ಲವಾ ಎಂಬುದು ಗೊತ್ತಾಬೇಕು. ವರದಿ ಕೊಟ್ಟ ಬಳಿಕ ತಪ್ಪು ಮಾಡಿಲ್ಲ ಅಂದರೆ ಬಿಲ್ ಕೊಡುತ್ತೇವೆ ಎಂದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿ ಸಂಬಂಧ ಗುತ್ತಿಗೆದಾರರಿಗೆ ಬಿಲ್ ಪಾವತಿಸದ ರಾಜ್ಯ ಸರ್ಕಾರ ತನಿಖೆಗೆ ನಡೆಸುತ್ತಿದೆ. ಆದರೆ, ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ವಿರುದ್ಧ ಕಮಿಷನ್ ಕೇಳಿದ ಆರೋಪವನ್ನು ಗುತ್ತಿಗೆದಾರರು ಮಾಡಿದ್ದಾರೆ. ಅಲ್ಲದೆ, ರಾಜ್ಯಪಾಲರಿಗೆ ದೂರು ನೀಡಿ ಬಾಕಿ ಬಿಲ್ ಪಾವತಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.ದೂರನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಿಬಿಎಂಪಿ ಆಯುಕ್ತರನ್ನು ಕರೆಸಿ ಮಾಹಿತಿ ಪಡೆದಿದ್ದಾರೆ.