Friday, June 2, 2023

Latest Posts

ಹಿಂಸಾಚಾರಕ್ಕೆ ತಿರುಗಿದ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ: 20 ಪೊಲೀಸರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತಮ್ಮ ಸೇವೆಯನ್ನು ಖಾಯಂಗೊಳಿಸಿ ಎಂದು ಛತ್ತೀಸ್‌ʼಗಢ ಸರ್ಕಾರಕ್ಕೆ ಒತ್ತಾಯಿಸಿ ಜಿಂಗರ್‌ ಚಂಪಾ ಜಿಲ್ಲೆಯಲ್ಲಿರುವ ಅಟಲ್‌ ಬಿಹಾರಿ ವಾಜಪೇಯಿ ಉಷ್ಣ ವಿದ್ಯುತ್‌ ಸ್ಥಾವರದ ಗುತ್ತಿಗೆ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, 20 ಪೊಲೀಸರು ಗಾಯಗೊಂಡಿದ್ದಾರೆ.
ರಾಜ್ಯ ಸರ್ಕಾರ ನಡೆಸುತ್ತಿರುವ ಈ ಉಷ್ಣ ವಿದ್ಯುತ್‌ ಸ್ಥಾವರದಲ್ಲಿ ಕಳೆದ ಕೆಲವು ದಿನಗಳಿಂದ ಅಲ್ಲಿನ ಗುತ್ತಿಗೆದಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಕೊರೋನಾ ಸೋಂಕು ಹೆಚ್ಚಾಗುವ ಭೀತಿಯಿಂದ ಸ್ಥಳೀಯ ಆಡಳಿತ ಹಾಗೂ ಪೊಲೀಸರು ಪ್ರತಿಭಟನಾಕಾರರನ್ನು ಸ್ಥಳದಿಂದ ತೆರಳುವಂತೆ ಮನವಿ ಮಾಡಿದಾಗ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.
ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತುಕತೆ ತೀವ್ರ ಹಂತಕ್ಕೆ ತಲುಪಿ ಪೊಲೀಸರ ವಾಹನಗಳನ್ನು ಪ್ರತಿಭಟನಾ ನಿರತರು ಜಖಂಗೊಳಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ನಿಯೋಜನೆಗೊಂಡಿದ್ದ 20 ಮಂದಿಗೆ ಗಾಯಗಳಾಗಿವೆ. ಖಾಸಗಿ ವಾಹನಗಳಿಗೂ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಸ್ಥಳದಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಜಲಫಿರಂಗಿಗಳನ್ನು ಬಳಸಿದ್ದಾರೆ ಎಂದು ವರದಿ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!