ಶರದ್ ಪವಾರ್ ವಿರುದ್ಧ ವಿವಾದಾತ್ಮಕ ಪೋಸ್ಟ್: ತಾನೇ ವಾದ ಮಾಡಿದ್ದ ನಟಿ 3 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶರದ್ ಪವಾರ್ ವಿರುದ್ಧ ವಿವಾದಾತ್ಮಕ ಪೋಸ್ಟ್ ಹಾಕಿದ್ದ ನಟಿ ಕೇತ್ಕಿ ಚಿತಾಳೆಯನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ನಟಿ ಕೇತ್ಕಿ ಚಿತಾಳೆಯನ್ನು ಪೊಲೀಸರು ನಿನ್ನೆ ಬಂಧಿಸಿದ್ದರು. ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಶೇಷ ಎಂದರೆ ಕೇತ್ಕಿ ಅವರೇ ನ್ಯಾಯಾಲಯದಲ್ಲಿ ತಮ್ಮ ಪರ ತಾವೇ ವಾದ ಮಂಡಿಸಿದ್ದರು.
ನ್ಯಾಯಮೂರ್ತಿ ವಿ ವಿ ರಾವ್ ಅವರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ತಾನು ತನ್ನನ್ನು ಸಮರ್ಥಿಸಿಕೊಳ್ಳುತ್ತೇನೆ ಎಂದು ಕೇತ್ಕಿ ನ್ಯಾಯಾಲಯಕ್ಕೆ ತಿಳಿಸಿದ್ದರು.
ನಾನು ಏನು ಹೇಳಿದ್ದೇನೋ ಅದು ನನ್ನ ಹಕ್ಕು. ನಾನು ಪೋಸ್ಟ್ ಮಾಡಿದ ಎಲ್ಲವೂ ನನ್ನ ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗವಾಗಿದೆ. ನಾನು ರಾಜಕಾರಣಿಯಲ್ಲ. ನಾನು ರಾಜಕೀಯ ನಾಯಕಿಯಲ್ಲ. ನಾನೊಬ್ಬ ಸಾಮಾನ್ಯ ವ್ಯಕ್ತಿ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಒಂದು ಭಾಗ. ನಮಗೆ ವಾಕ್ ಮತ್ತು ಬರವಣಿಗೆಯ ಸ್ವಾತಂತ್ರ್ಯ ಇಲ್ಲವೇ? ಎಂದು ಇಂಗ್ಲಿಷ್​ನಲ್ಲಿ ವಾದ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!