ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ : ಡಿಎಂಕೆ ಸಂಸದ ರಾಜಾ ವಿರುದ್ಧ ದೂರು ದಾಖಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸನಾತನ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸಂಸದ ಎ.ರಾಜಾ ವಿರುದ್ಧ ದೂರು ದಾಖಲಾಗಿದೆ.

ಡಿಎಂಕೆ ಸಂಸದ ಸನಾತನ ಧರ್ಮವನ್ನು ಎಚ್‌ಐವಿ ಮತ್ತು ಕುಷ್ಠರೋಗಕ್ಕೆ ಹೋಲಿಸಿದ್ದರು . ಇಂದು ಎ ರಾಜಾ ವಿರುದ್ಧ ದೆಹಲಿ ಪೊಲೀಸರಿಗೆ ದೂರು ನೀಡಲಾಗಿದ್ದು, ಸಾಮಾಜಿಕ ಕಾರ್ಯಕರ್ತ ಮತ್ತು ವಕೀಲ ವಿನೀತ್ ಜಿಂದಾಲ್  ದೂರು ದಾಖಲಿಸಿದ್ದಾರೆ. ಸನಾತನ ಧರ್ಮವನ್ನು ಅವಮಾನಿಸಲಾಗುತ್ತಿದೆ. ಧರ್ಮದ ಆಧಾರದ ಮೇಲೆ ಸಮಾಜವನ್ನು ವಿಭಜಿಸುತ್ತಿದೆ ಮತ್ತು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಡಿಎಂಕೆ ಸಂಸದ ಎ ರಾಜಾ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದು, ಸನಾತನ ಧರ್ಮ ಏಡ್ಸ್ ಮತ್ತು ಕುಷ್ಟರೋಗವಿದ್ದಂತೆ ಎಂದು ಹೇಳುವ ಮೂಲಕ ಉದಯನಿಧಿ ಹೇಳಿಕೆಗೆ ಬೆಂಬಲ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!