ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ: ರಾಜ್ಯ ಮಹಿಳಾ ಆಯೋಗದಿಂದ ನಟ ದರ್ಶನ್ ಗೆ ನೋಟೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ದರ್ಶನ್ ಅವರಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದಿಂದ ನೋಟಿಸ್ ಬಂದಿದೆ. ಹೆಣ್ಣು ಮಕ್ಕಳ ಬಗ್ಗೆ ಅಸಮಂಜಸ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ನೊಟೀಸ್ ಸ್ವೀಕರಿಸಿದ 10 ದಿನದೊಳಗೆ ಹಾಜರಾಗಿ ಹೇಳಿಕೆ ನೀಡುವಂತೆ ಆದೇಶಿಸಲಾಗಿದೆ.

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಟ ದರ್ಶನ್ ಚಿತ್ರರಂಗಕ್ಕೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಳ್ಳಿಹಬ್ಬವನ್ನು ಆಯೋಜಿಸಲಾಗಿತ್ತು. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ದರ್ಶನ್ ಹುಡುಗಿಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಮಹಿಳಾ ಆಯೋಗಕ್ಕೆ ಗೌಡತಿಯರ ಸೇನೆ ದೂರು ನೀಡಿದ್ದಾರೆ.

ಹೆಣ್ಣು ಮಕ್ಕಳ ಕುರಿತಾದ ವಿವಾದಾತ್ಮಕ ಹೇಳಿಕೆಯನ್ನು ವಿರೋಧಿಸಿ ಗೌಡತಿ ಸೇನೆಯು ಕಾನೂನು ಕ್ರಮಕ್ಕೆ ಆಗ್ರಹಿಸಿದೆ. ಗೌಡತಿಯರ ಸೇನೆ ರಾಜ್ಯಾಧ್ಯಕ್ಷರಾದ ಶ್ರೀಮತಿ ರೇಣುಕಾ ದೂರಿನ ಮೇರೆಗೆ ರಾಜ್ಯ ಮಹಿಳಾ ಆಯೋಗ ದರ್ಶನ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ 10 ದಿನಗಳಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!