ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್​ಐಆರ್

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ನರೇಂದ್ರ ಮೋದಿ (Narendra Modi) ನನ್ನ ಕೈಗೆ ಸಿಕ್ರೆ ಕಾಲಲ್ಲಿರೋದು ತೆಗೆದು ಹೊಡೀತಿನಿ ಎಂದು ಹೇಳಿಕೆ ನೀಡಿದ್ದ ಕಾರ್ಮಿಕರ ಕಲ್ಯಾಣ ಮಂಡಳಿಯ ಉಪಾಧ್ಯಕ್ಷ ಜಿ.ಎಸ್ ಮಂಜುನಾಥ್ ವಿರುದ್ಧ ದೂರು ದಾಖಲಾಗಿದೆ.

ಚಿತ್ರದುರ್ಗ(Chitradruga) ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ ಅವರು ನೀಡಿದ ದೂರಿನ ಅನ್ವಯ ಕಾಂಗ್ರೆಸ್ ಮುಖಂಡ ಜಿಎಸ್ ಮಂಜುನಾಥ್ ವಿರುದ್ಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಹಿರಿಯೂರಲ್ಲಿ ಸಮುದಾಯ ಭವನ ಉದ್ಘಾಟನೆ ವೇಳೆ ಮಾತನಾಡಿದ್ದ ಮಂಜನಾಥ್, ಚುನಾವಣೆ (Lok Sabha Elections 2024) ವೇಳೆ ಸಿಲಿಂಡರ್ ದರ 100 ರೂ. ಕಡಿಮೆ ಮಾಡಿದ್ದಾರೆ. ನನಗೇನಾದರು ಸಿಕ್ಕರೆ ಕಾಲಿನಲ್ಲಿರುವುದು ತೆಗೆದು ಹೊಡೆಯುತ್ತಿದ್ದೆ ಎಂದು ಪ್ರಧಾನಿ ಮೋದಿ (Narendra Modi) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!