ಸಂವಿಧಾನದ ಕುರಿತು ವಿವಾದಿತ ಹೇಳಿಕೆ: ಕೇರಳ ಸಚಿವ ಸಾಜಿ ಚೆರಿಯನ್ ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತೀಯ ಸಂವಿಧಾನದ ವಿರುದ್ಧ ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿದ್ದ ಕೇರಳದ ಮೀನುಗಾರಿಕೆ ಮತ್ತು ಸಂಸ್ಕೃತಿ ಸಚಿವ ಸಾಜಿ ಚೆರಿಯನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಅಲಪ್ಪುಳದ ಮಲ್ಲಪಲ್ಲಿಯಲ್ಲಿ ನಡೆದ ಸಿಪಿಎಂ ಸಮಾರಂಭದಲ್ಲಿ ಸಚಿವ ಸಾಜಿ ಚೆರಿಯನ್, ಭಾರತೀಯ ಸಂವಿಧಾನವು ಸಾರ್ವಜನಿಕರನ್ನು ಲೂಟಿ ಮಾಡಲು ಸಹಾಯ ಮಾಡುತ್ತಿದೆ ಎಂದಿದ್ದರು.
ಜಾತ್ಯತೀತತೆ, ಪ್ರಜಾಪ್ರಭುತ್ವದ ಬಗ್ಗೆ ಸಡಿಲವಾಗಿ ವಿವರಿಸಲಾಗಿದೆ. ಭಾರತೀಯ ಸಂವಿಧಾನವು ಕಾರ್ಮಿಕರ ಶೋಷಣೆಗೆ ಸಹಾಯ ಮಾಡಿದೆ ಮತ್ತು ದೇಶದಲ್ಲಿ ಕಾರ್ಮಿಕರಿಗೆ ಯಾವುದೇ ರಕ್ಷಣೆ ನೀಡುತ್ತಿಲ್ಲ ಎಂದು ವಿವಾದಿತ ಹೇಳಿಕೆ ನೀಡಿದ್ದರು.
ಅವರ ಈ ಹೇಳಿಕೆ ಖಂಡಿಸಿ ಇಂದು ಕೇರಳ ವಿಧಾನಸಭೆಯಲ್ಲಿ ಪ್ರತಿಪಕ್ಷ ದಿಂದ ಪ್ರತಿಭಟನೆ ನಡೆಸಿತು. ಸಚಿವ ಸಾಜಿ ಚೆರಿಯನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಯುಡಿಎಫ್ ಸದಸ್ಯರು ತೀವ್ರ ಗದ್ದಲ ಎಬ್ಬಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!