ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಕ್ಕಲಿಗ ಸಮುದಾಯದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರೊ. ಭಗವಾನ್ ಅವರ ಮೈಸೂರಿನ ಕುವೆಂಪು ನಗರದಲ್ಲಿರುವ ನಿವಾಸಕ್ಕೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಒಕ್ಕಲಿಗರು ಸಂಸ್ಕೃತಿ ಹೀನರು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರೊ. ಭಗವಾನ್ ಭಾರೀ ಟೀಕೆಗೆ ಒಳಗಾಗಿದ್ದರು. ಒಕ್ಕಲಿಗರ ಸಂಘದವರು ಭಗವಾನ್ ಮನೆ ಮೇಲೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪ್ರತಿಭಟನಕಾರರು ಮತ್ತು ಪೊಲೀಸರ ನಡುವೆ ಕಲೆಕಾಲ ವಾಗ್ವಾದ ನಡೆದಿದೆ.
ಇಂದು ಮೈಸೂರು ಚಾಮರಾಜನಗರದ ಒಕ್ಕಲಿಗರ ಸಂಘದವರು ಪ್ರೊ. ಭಗವಾನ್ ಅವರ ವಿರುದ್ದ ಧಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಪೊಲೀಸ್ ಭಧ್ರತೆ ಕಲ್ಪಿಸಲಾಗಿದೆ.