ರಾಮಚರಿತಮಾನಸ ಕುರಿತು ವಿವಾದಾತ್ಮಕ ಹೇಳಿಕೆ: ಪ್ರಸಾದ್ ಮೌರ್ಯ ವಿರುದ್ಧ ವಿರುದ್ಧ ಎಫ್ಐಆರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಲವು ದಿನಗಳ ಹಿಂದೆ ರಾಮಚರಿತಮಾನಸ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ರಾಮಚರಿತಮಾನಸ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ಸ್ವಾಮಿ ಪ್ರಸಾದ್ ಮೌರ್ಯ ಅವರ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಹಜರತ್ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಬಜಾರ್ ಖಲಾ ಪ್ರದೇಶದ ಐಶ್ಬಾಗ್ ಪ್ರದೇಶದ ನಿವಾಸಿ ಶಿವೇಂದ್ರ ಮಿಶ್ರಾ ಅವರು ನೀಡಿದ ದೂರಿನ ಆಧಾರ ಮೇಲೆ ಮೌರ್ಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!