ಉದ್ಘಾಟನೆಗೆ ಮೊದಲೇ ಉದ್ಭವಿಸಿದ ವಿವಾದ: ನೂತನ ಸಂಸತ್ ಭವನ ಸುತ್ತ ಮುತ್ತ ಬಿಗಿ ಭದ್ರತೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರ ರಾಜಧಾನಿಯಲ್ಲಿ ಮೇ 28ರಂದು ನೂತನ ಸಂಸತ್ ಭವನ ಉದ್ಘಾಟನೆ ಸಮಾರಂಭ ನಡೆಯಲಿದ್ದು, ಉದ್ಘಾಟನೆಗೂ ಮುನ್ನ ಉದ್ಭವಿಸಿದ ವಿವಾದಗಳ ಹಿನ್ನೆಲೆ ಭವನದ ಆವರಣದ ಸುತ್ತ ಭದ್ರತೆ ಹೆಚ್ಚಿಸಲಾಗಿದೆ. ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಈ ಪ್ರದೇಶದ ಸುತ್ತಮುತ್ತ ನಿಯೋಜಿಸಲಾಗಿದೆ ಎಂದು ದೆಹಲಿ ಪೊಲೀಸ್ ವಿಶೇಷ ಅಧಿಕಾರಿ ದೀಪೇಂದರ್ ಪಾಠಕ್ ಹೇಳಿದ್ದಾರೆ.

ಕಾಂಗ್ರೆಸ್‌, ಆಮ್‌ ಆದ್ಮಿ ಪಕ್ಷ (ಎಎಪಿ), ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಹಾಗೂ ಸಮಾಜವಾದಿ ಪಕ್ಷ (ಎಸ್‌ಪಿ) ಸೇರಿದಂತೆ 19 ವಿರೋಧ ಪಕ್ಷಗಳು, ಸಂಸತ್‌ ಭವನದ ಉದ್ಘಾಟನಾ ಸಮಾರಂಭ ಬಹಿಷ್ಕರಿಸುವುದಾಗಿ ಘೋಷಿಸಿವೆ.

ಆವರಣದ ಗೋಡೆಗಳ ಮೇಲೆ ದುಷ್ಕರ್ಮಿಗಳು ಹಾಕಬಹುದಾದ ಕೆಲವು ಪ್ರಧಾನಿ ವಿರೋಧಿ ಮತ್ತು ಭಾರತ ವಿರೋಧಿ ಘೋಷಣೆಗಳ ಬಗ್ಗೆ ದೆಹಲಿ ಪೊಲೀಸರು ಮಾಹಿತಿ ಪಡೆದುಕೊಂಡಿದ್ದು, ಆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

ಕುಸ್ತಿ ಒಕ್ಕೂಟದ ಮುಖ್ಯಸ್ಥರ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಮೇ 28 ರಂದು ಹೊಸ ಸಂಸತ್ ಭವನದ ಮುಂದೆ ಮಹಿಳಾ ಮಹಾಪಂಚಾಯತ್ ನಡೆಸಲು ನಿರ್ಧರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!