ನಿಖಿಲ್‌ಗೆ ದೇವಸ್ಥಾನ ಪ್ರವೇಶ ನಿರಾಕರಣೆ ವಿವಾದ: ಕೈ ಕೈ ಮಿಲಾಯಿಸಿಕೊಂಡ ಜೆಡಿಎಸ್–ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಗಂತ ವರದಿ ರಾಮನಗರ: ಹಾರೋಹಳ್ಳಿ ತಾಲ್ಲೂಕಿನ ದೊಡ್ಡ ಕುರುಬರಹಳ್ಳಿ ಗ್ರಾಮದ ಬಿಸಿಲು ಮಾರಮ್ಮ ದೇವಸ್ಥಾನಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಪ್ರವೇಶಿಸಿ ನೀಡದೆ ಬೀಗ ಹಾಕಲಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರು ದೇವಸ್ಥಾನ ಬಳಿ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೊಡ್ಡ ಕುರುಬರಹಳ್ಳಿ ಗ್ರಾಮದ ಬಿಸಿಲು ಮಾರಮ್ಮ ನೂತನ ದೇವಸ್ಥಾನ ಶುಕ್ರವಾರ ಉದ್ಘಾಟನೆಯಾಗಿದ್ದು, ಈ ದೇವಸ್ಥಾನಕ್ಕೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿಗೆ ಬಾಗಿಲು ಹಾಕಿ ದೇವಸ್ಥಾನದ ಹೊರಗೆ ನಿಲ್ಲಿಸಿ ಅವಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. … Continue reading ನಿಖಿಲ್‌ಗೆ ದೇವಸ್ಥಾನ ಪ್ರವೇಶ ನಿರಾಕರಣೆ ವಿವಾದ: ಕೈ ಕೈ ಮಿಲಾಯಿಸಿಕೊಂಡ ಜೆಡಿಎಸ್–ಕಾಂಗ್ರೆಸ್ ಕಾರ್ಯಕರ್ತರು