Sunday, December 4, 2022

Latest Posts

ವಿವಾದಕ್ಕೆ ಎಡೆ ಮಾಡಿಕೊಟ್ಟ ತರೂರ್‌ ನಾಮಪತ್ರ ಸಲ್ಲಿಕೆ: ಭಾರತ ನಕಾಶೆಯೇ ತಪ್ಪಾಗಿ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಶಶಿ ತರೂರ್ ನಾಮಪತ್ರ ಸಲ್ಲಿಸಿದ ದಿನವೇ ಅವರ ಚುನಾವಣಾ ಪ್ರಣಾಳಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಂತಿದೆ. ಶಶಿ ತರೂರ್ ಅವರ ಚುನಾವಣಾ ಪ್ರಣಾಳಿಕೆಯು ಭಾರತದ ನಕ್ಷೆಯನ್ನು ತಪ್ಪಾಗಿ ತೋರಿಸಿದ ಹಿನ್ನೆಲೆಯಲ್ಲಿ ಬಿಜೆಪಿಯು ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ಕಾಂಗ್ರೆಸ್ ಅಧ್ಯಕ್ಷೀಯ ಅಭ್ಯರ್ಥಿ ಶಶಿ ತರೂರ್ ಅವರ ಪ್ರಣಾಳಿಕೆಯು ಭಾರತದ ತಪ್ಪು ನಕ್ಷೆಯನ್ನು ತೋರಿಸಿದೆ. ಈ ನಕ್ಷೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಕೆಲವು ಭಾಗಗಳನ್ನು ಬಿಟ್ಟುಬಿಡಲಾಗಿದೆ. ಇಷ್ಟೆಲ್ಲ ವಿವಾದಗಳು ಭುಗಿಲೆದ್ದ ಮೇಲೆ ತರೂರ್‌ ಅವರು ಪ್ರನಾಳಿಕೆಯನ್ನು ಸರಿ ಪಡಿಸಿ ಪ್ರಕಟಿಸಿದ್ದಾರೆ.

ಈ ಕುರಿತು ಬಿಜೆಪಿ ನಾಯಕ ಅಮಿತ್ ಮಾಳವಿಯಾ ಮಾತನಾಡಿದ್ದು “ಕಾಂಗ್ರೆಸ್ ಅಧ್ಯಕ್ಷೀಯ ಭರವಸೆಯ ಶಶಿ ತರೂರ್ ಅವರು ತಮ್ಮ ಪ್ರಣಾಳಿಕೆಯಲ್ಲಿ ಭಾರತದ ನಕ್ಷೆಯನ್ನು ವಿರೂಪಗೊಳಿಸಿದ್ದಾರೆ. ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ತೊಡಗಿರುವಾಗ, ಕಾಂಗ್ರೆಸ್ ಅಧ್ಯಕ್ಷರು ಭಾರತವನ್ನು ಛಿದ್ರಗೊಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!