ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನದಲ್ಲಿ ನಡೆಯುತ್ತಿರುವ ಸಮಾವೇಶ ಪಕ್ಷದ ಸಮಾವೇಶವಾಗಿದ್ದು, ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸಚಿವ ಡಾ.ಎಂ.ಸಿ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಹಾಸನ ಸಮಾವೇಶ ಗೊಂದಲ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹಾಸನ ಅಹಿಂದ ಸಮಾವೇಶ ಅಲ್ಲ. ಪಕ್ಷದ ಕಾರ್ಯಕ್ರಮವಾಗಿದೆ. ಹಿತೈಷಿಗಳು ಸೇರಿ ಇದು ಪಕ್ಷದ ಕಾರ್ಯಕ್ರಮ ಎಂದು ಮಾಡುತ್ತಿದ್ದಾರೆ. ಯಾವ ಊಹಾಪೋಹಗಳಿಗೆ ಬೆಲೆ ಕೊಡಬೇಡಿ ಎಂದು ತಿಳಿಸಿದ್ದಾರೆ.
ಬಿಜೆಪಿಯವರು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮಾತಾಡಿದರೆ ಸರ್ಕಾರದಲ್ಲಿ ಹಣ ಇಲ್ಲ, ಸರ್ಕಾರ ದಿವಾಳಿ ಆಗಿದೆ ಎಂದು ಹೇಳುತ್ತಾರೆ. ಇಲಾಖೆಯಲ್ಲಿ ಹಣ ಇದೆ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ನಾವೆಲ್ಲರೂ ಒಟ್ಟಾಗಿ ಇದ್ದೇವೆ ಎಂದು ತಿಳಿಸಿದ್ದಾರೆ.