ಕುವಿವಿ ಘಟಿಕೋತ್ಸವ: ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದ ರಾಜ್ಯಪಾಲ ತಾವರಚಂದ್

ಹೊಸದಿಗಂತ ವರದಿ, ಶಿವಮೊಗ್ಗ :
ಹೊಸ ಶಿಕ್ಷಣ ನೀತಿಯಲ್ಲಿ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಭಾರತ ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಲು ಇದು ಪೂರಕವಾಗಿದೆ ಎಂದು ರಾಜ್ಯಪಾಲ ತಾವರಚಂದ್ ಗೆಹ್ಲೂಟ್ ಹೇಳಿದರು.
ಕುವೆಂಪು ವಿವಿ ಜ್ಞಾನ ಸಹ್ಯಾದ್ರಿಯಲ್ಲಿ ಗುರುವಾರ ಆಯೋಜಿಸಿದ್ದ 31 ಮತ್ತು 32 ನೇ ಘಟಿಕೋತ್ಸವದಲ್ಲಿ ಅಭ್ಯರ್ಥಿಗಳಿಗೆ ವಿವಿಧ ಪದವಿ ಪ್ರಧಾನ ಮಾಡಿ ಮಾತನಾಡಿದರು.
ಪ್ರಸ್ತುತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಭಾತರದ ಸಾಧನೆ ತೃಪ್ತಿಕರವಾಗಿಲ್ಲ. ಈ ಬಾರಿ ಒಲಂಪಿಕ್ ಕ್ರೀಡಾಕೂಟದಲ್ಲಿ ಹೆಚ್ಚಿನ ಪದಕಗಳು ಬಂದಿಲ್ಲ. ಆದರೆ ದಿವ್ಯಾಂಗರ ಒಲಂಪಿಕ್ ನಲ್ಲಿ ಹೆಚ್ಚಿನ ಪದಕಗಳು ಬಂದಿರುವುದು ಶ್ಲಾಘನೀಯ ಎಂದರು.
ಪದವಿ ಪಡೆದ ವಿದ್ಯಾರ್ಥಿಗಳುಗಳು ದೇಶದ ಹಿತಕ್ಕಾಗಿ ಕೆಲಸ ಮಾಡಬೇಕಿದೆ. ರಾಷ್ಟ್ರ ಕವಿ ಕುವೆಂಪು ಹೆಸರೇ ವಿವಿ ಗೆ ಪ್ರೆರಣಾದಾಯಕವಾಗಿದೆ. ವಿವಿ ಕೂಡ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವುದರಿಂದ ಇಲ್ಲಿ ಕಲಿಯುವುದೇ ಒಂದು ಹೆಮ್ಮೆ ಎಂದರು.
ಡಿಗ್ರಿ ಆದ ಮೇಲೆ ಕೇವಲ ಕೆಲಸಕ್ಕಾಗಿ ಹುಡುಕಾಟ ನಡೆಸದೆ ಅಧ್ಯಯನ ನಡೆಸುವ ಮೂಲಕ ದೇಶಕ್ಕೆ ಕೊಡುಗೆ ನೀಡುವಂತಾಗಬೇಕು.ಗುಣಮಟ್ಟದ ನೈತಿಕ ಶಿಕ್ಷಣದಿಂದ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ. ದೇಶದ ಉಜ್ವಲ ಭವಿಷ್ಯಕ್ಕೆ ಸರ್ಕಾರ ಜಾರಿಗೆ ತರುವ ಯೋಜನೆಗಳಲ್ಲಿ ನಿಮ್ಮ ಸಹಭಾಗಿತ್ವ ಇರಬೇಕು ಎಂದರು.
ಗೌರವ ಡಾಕ್ಟರೇಟ್ ಪದವಿ ಪಡೆದವರು ಅವರವರ ಕ್ಷೇತ್ರದಲ್ಲಿ ಅತ್ಯುತಮ ಸಾಧನೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಸಾಧನೆ ಮಾಡತಾಗಲಿ. ನಿಮ್ಮ ಜ್ಞನ ಯುವ ಪೀಳಿಗೆಗೆ ಇನ್ನಷ್ಟು ಪ್ರೇರಣಾದಾಯಕವಾಗಿರಲಿ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!