ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು ಕುಕ್ಕರ್ ಬ್ಲಾಸ್ಟ್ರ ಪ್ರಕರಣದ ಉಗ್ರ ಶಾರೀಕ್ನನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಘಟನೆಯಲ್ಲಿ ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾರೀಕ್ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೂಲಗಳ ಪ್ರಕಾರ ಶುಕ್ರವಾರ ರಾತ್ರಿಯೇ ಮಂಗಳೂರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಶಂಕಿತ ಉಗ್ರನನ್ನು ವಿಕ್ಟೋರಿಯಾ ಬರ್ನಿಂಗ್ ಸೆಂಟರ್ಗೆ ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಎನ್ಐಎ ಅಧಿಕಾರಿಗಳು ದಾಖಲು ಮಾಡಿದ್ದಾರೆ. ಘಟನೆ ಮುಂದುವರಿದ ತನಿಖೆ ಬೆಂಗಳೂರಿನ ಎನ್ಐಎ ಕಚೇರಿಯಲ್ಲಿಯೇ ಶಾರೀಕ್ನ ವಿಚಾರಣೆ ನಡೆಯಲಿದೆ ಎಂದು ತಿಳಿದುಬಂದಿದೆ.