Friday, February 23, 2024

ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ: ನಾಳೆ ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರಿನ ಪರಿಸರದಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣದ ಸಂಬಂಧ ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಈ ವೇಳೆ ಸಚಿವರು, ಬಾಂಬ್ ಸ್ಫೋಟ ಘಟನೆಯಿಂದ ಗಾಯಗೊಂಡ ಆಟೋ ರಿಕ್ಷಾ ಚಾಲಕನನ್ನೂ ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮಂಗಳೂರು ಆಟೋ ರಿಕ್ಷಾ ಬಾಂಬ್ ಸ್ಫೋಟ ಘಟನೆಯನ್ನು ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಭಯೋತ್ಪಾದನೆ ಚಟುವಟಿಕೆಗಳನ್ನು ಆಮೂಲಗ್ರಹವಾಗಿ ತನಿಖೆ ಮಾಡಿ, ದ್ರೋಹಿಗಳನ್ನು ಮಟ್ಟ ಹಾಕಲು ಪೋಲಿಸರು ಶ್ರಮಿಸುತ್ತಿದ್ದಾರೆ. ರಾಷ್ಟ್ರೀಯ ತನಿಖಾ ದಳವೂ (NIA) ಇದಕ್ಕೆ ಸಹಕರಿಸುತ್ತಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!