Monday, December 4, 2023

Latest Posts

ಕುಕ್ಕರ್ ಬಾಂಬ್ ಸ್ಪೋಟ: ಘಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಮಾಹಿತಿ ಪಡೆದ ಗೃಹ ಸಚಿವ ಆರಗ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿಯೇ ತೀವ್ರ ಚರ್ಚೆಗೆ ಗ್ರಾಸವಾಗಿರುವ ಮಂಗಳೂರು ನಾಗುರಿಯ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ತೀವ್ರಗೊಳ್ಳುತ್ತಿರುವ ನಡುವೆಯೇ ಬುಧವಾರ ಮಂಗಳೂರಿಗೆ ಭೇಟಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಘಟನಾ ಸ್ಥಳಕ್ಕೆ ಖುದ್ದಾಗಿ ತೆರಳಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು.

ಬಳಿಕ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ ಗೃಹ ಸಚಿವರು ಪುರುಷೋತ್ತಮ್ ಹಾಗೂ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ನ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ಪಡೆದುಕೊಂರು.

ಶಾಸಕ ಡಾ. ಭರತ್ ಶೆಟ್ಟಿ, ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ, ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್, ಜಿಲ್ಲಾಧಿಕಾರಿ ರವಿಕುಮಾರ್, ಡಿಸಿಪಿ ಅನ್ಶು ಕುಮಾರ್, ದಿನೇಶ್, ಎಸಿಪಿ ಪಿ.ಎ. ಹೆಗ್ಡೆ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!