ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ | ಕರಾವಳಿಯ ವಿವಿಧ ಕಡೆಗಳಲ್ಲಿ ಪೊಲೀಸ್ ಭದ್ರತೆ ಬಿಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು ನಗರದ ನಾಗುರಿ ಪರಿಸರದಲ್ಲಿ ಶನಿವಾರ ಸಂಜೆ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಸ್ಫೋಟ ಪ್ರಕರಣದ ಬೆನ್ನಿಗೇ ಕರಾವಳಿಯ ವಿವಿಧ ಕಡೆಗಳಲ್ಲಿ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ.
ಪ್ರಕರಣದ ನಿಗೂಢತೆ ಬೇಧಿಸಲು ಈಗಾಗಲೇ ಪೊಲೀಸರು ಹತ್ತು ತಂಡಗಳನ್ನು ರಚಿಸಿಕೊಮಡಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ನಾಗುರಿ ಪ್ರಕರಣಕ್ಕೆ ಸಂಬಂಧಿಸಿ ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆಗಾಗಿ ಕೇಂದ್ರೀಯ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಲಾಗಿದ್ದು, ವಿವಿಧ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!