ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟ: ಯುವಕ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:
 
ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟಗೊಂಡುಯುವಕನೊಬ್ಬ ಮೃತಪಟ್ಟು, ಮತ್ತೊಬ್ಬ ಯುವಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಂಗಳವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮೃತ ಹಾಗೂ ಗಾಯಗೊಂಡ ಯುವಕ ಇಬ್ಬರೂ ಉತ್ತರ ಪ್ರದೇಶ ಮೂಲದವರಾಗಿದ್ದಾರೆ.

ಉತ್ತರ ಪ್ರದೇಶ ಮೂಲದ ಮೋಸಿನ್ ಮೃತ. ಸಮೀರ್‌ ಗಾಯಾಳು. ಜೆ.ಪಿ.ನಗರದ ಆರನೇ ಹಂತದಲ್ಲಿ ಘಟನೆ ನಡೆದಿದ್ದು, ಕುಕ್ಕರ್‌ನ ಪ್ರೆಷರ್ ಹೆಚ್ಚಾಗಿ ಬ್ಲಾಸ್ಟ್ ಆಗಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಬೆನ್ನಲ್ಲೆ ಪುಟ್ಟೇನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಕುಕ್ಕರ್ ಸ್ಫೋಟಗೊಂಡ ಬೆನ್ನಲ್ಲೇ ದೊಡ್ಡ ಪ್ರಮಾಣದ ಶಬ್ದ ಬಂದಿದ್ದು, ಮನೆಯಲ್ಲಿ ಇದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಉತ್ತರ ಪ್ರದೇಶ ಮೂಲದ ಇಬ್ಬರು ಯುವಕರು ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಘಟನಾ ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ ಮುಂದುವರಿದಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!