ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾನ್ಯವಾಗಿ ಬೆಳಗಿನ ಜಾವ ವಾತಾವರಣ ತಂಪಾಗಿರಲಿದ್ದು, ಮಧ್ಯಾಹ್ನದ ವೇಳೆದ ಬಿಸಿಲು ಅಬ್ಬರಿಸಲಿದೆ. ಇನ್ನೂ ಸಂಜೆ ಹೊತ್ತಿನಲ್ಲಿ ತಂಪು ಗಾಳಿ ಬೀಸಲಿದೆ. ಇಂದು ಮಳೆಯಾಗುವ ನಿರೀಕ್ಷೆಯಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.