October 9, 2026
Friday, October 9, 2026
spot_img

ರಾಜ್ಯದ ಜನತೆಗೆ ಕೂಲ್ ನ್ಯೂಸ್: ಮುಂದಿನ 3 ದಿನ ಭಾರೀ ಗಾಳಿ, ಮಳೆ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿ ಪ್ರಕಾರ, ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಮೋಡ ಕವಿದ ವಾತಾವರಣ ಇರಲಿದೆ. ಗಾಳಿಯಲ್ಲಿನ ತೇವಾಂಶ ಹೆಚ್ಚಾಗಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ತಾಪಮಾನ ಇಳಿಕೆಯಾಗಿ ತಂಪಾದ ಗಾಳಿ ಬೀಸಲಿದೆ.

ಕರಾವಳಿ ಜಿಲ್ಲೆಗಳಿಗೆ ಮಳೆ ಮುನ್ನೆಚ್ಚರಿಕೆ

ಕರಾವಳಿಯಲ್ಲಿ ಮುಂಗಾರು ಮಾರುತಗಳು ಸಕ್ರಿಯವಾಗಿವೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಜೊತೆಗೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಕರಾವಳಿ ಜನರಿಗೆ ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

ಮಲೆನಾಡು ಹಾಗೂ ಬಯಲುಸೀಮೆಯಲ್ಲಿ ಗಾಳಿಯ ಆರ್ಭಟ

ದಕ್ಷಿಣ ಒಳನಾಡಿನ ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಇದೇ ವೇಳೆ ಬಯಲುಸೀಮೆಯ ಜಿಲ್ಲೆಗಳಾದ ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದ ಬಲವಾದ ಗಾಳಿ ಬೀಸಲಿದ್ದು, ಹವಾಮಾನದಲ್ಲಿ ಏರುಪೇರಾಗಲಿದೆ.

Must Read