ಒಳ್ಳೆಯ ಕಾರ್ಯಕ್ಕೆ ಸಹಕಾರ, ಹಿಡನ್ ಅಜೆಂಡ, ಜನವಿರೋಧಿ ನೀತಿ ವಿರುದ್ಧ ಹೋರಾಟ: ಸಿ.ಟಿ.ರವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರು: ಒಳ ಮೀಸಲಾತಿಯ ಒಳಪೆಟ್ಟು, ಜನರು ಗ್ಯಾರಂಟಿ ಕಾರ್ಡ್ ನಂಬಿ ಮತ ಚಲಾಯಿಸಿದ್ದು, ನೆಗೆಟಿವ್ ನರೇಟಿವ್ ಪರಿಣಾಮವಾಗಿ ಬಿಜೆಪಿ ಸೋತಿದೆ ಎಂಬ ಅಭಿಪ್ರಾಯ ಇಂದಿನ ಪರಾಮರ್ಶೆ ಸಭೆಯಲ್ಲಿ ವ್ಯಕ್ತವಾಗಿದೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಅಭಿಪ್ರಾಯಪಟ್ಟರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, 1985 ಹೊರತುಪಡಿಸಿ ಆಡಳಿತ ಪಕ್ಷ ಮತ್ತೆ ಅಧಿಕಾರಕ್ಕೆ ಬಂದಿರಲಿಲ್ಲ ಎಂದು ನುಡಿದರು. ನೂತನವಾಗಿ ಆಯ್ಕೆಯಾದ ಶಾಸಕರಿಗೆ ವಿಶ್ವಾಸ ತುಂಬಲಾಗಿದೆ. ರಚನಾತ್ಮಕ ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸಲು ನಿರ್ಧರಿಸಲಾಗಿದೆ ಎಂದರು.

ಒಳ್ಳೆಯ ಕಾರ್ಯಕ್ಕೆ ಸಹಕಾರ, ಜನವಿರೋಧಿ ಕಾರ್ಯ ಮುಂದುವರಿಸಿದಾಗ, ಹಿಡನ್ ಅಜೆಂಡ ಜೊತೆ ರಾಜ್ಯಕ್ಕೆ ಘಾತುಕ ನಿರ್ಣಯ ಕೈಗೊಂಡರೆ ಹೋರಾಡಲು ನಿರ್ಧರಿಸಲಾಗಿದೆ ಎಂದರು. ನಮ್ಮ ಮತ ಪ್ರಮಾಣ ಕಡಿಮೆ ಆಗಿಲ್ಲ ಎಂದು ವಿವರಿಸಿದರು.

ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆಯಿತು. ಮಾಜಿ ಸಿಎಂಗಳಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸದಾನಂದ ಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಈಶ್ವರಪ್ಪ ಹಾಗೂ ನಾನೂ ಒಳಗೊಂಡಂತೆ ಅ ಸಭೆ ನಡೆಸಿದ್ದೇವೆ ಎಂದು ವಿವರಿಸಿದರು.

ಬಿಜೆಪಿ ಎದೆಗುಂದುವ ಪಕ್ಷವಲ್ಲ. 1984 ರ ಲೋಕಸಭಾ ಚುನಾವಣೆಯಲ್ಲಿ ಕೇವಲ ಎರಡು ಸ್ಥಾನ ಗೆದ್ದಿತ್ತು. ಅದರೆ ಎದೆಗುಂದಲಿಲ್ಲ ಎಂದರು.

ಶೀಘ್ರವೇ ವಿಪಕ್ಷ ನಾಯಕನ ಹೆಸರನ್ನು ಪ್ರಕಟಿಸುವುದಾಗಿಯೂ ಸಿ.ಟಿ.ರವಿ ಅವರು ತಿಳಿಸಿದರು. ಈ ಕುರಿತು ಅರುಣ್ ಸಿಂಗ್ ಅವರು ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ ಎಂದು ವಿವರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!