ಹೊಸದಿಗಂತ ವರದಿ, ಮಡಿಕೇರಿ
ಕೊಡಗು ಜಿಲ್ಲಾ ಸಹಕಾರ ಭಾರತೀಯ ಸದಸ್ಯತ್ವ ಆಂದೋಲನ ಮೇ 9 ರಂದು 10.30 ಗಂಟೆಗೆ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆಯಲಿದೆ.
ಸಹಕಾರ ಭಾರತೀಯ ರಾಷ್ಟ್ರೀಯ ಸಂರಕ್ಷಕ್ ರಮೇಶ್ ವ್ಯೆದ್ಯ ಹಾಗೂ ರಾಜ್ಯಾಧ್ಯಕ್ಷ ರಾಜಶೇಖರ್ ಶೀಲವಂತ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮೋಹನ್’ದಾಸ್ ನಾಯಕ್, ರಾಜ್ಯ ಸಂಘಟನಾ ಕಾರ್ಯದರ್ಶಿ ಮಂಜುನಾಥ್, ರಾಜ್ಯ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಮಡ್ತಿಲ ಪಾಲ್ಗೊಳ್ಳಲಿದ್ದಾರೆ.
ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಮನು ಮುತ್ತಪ್ಪ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಮಾಜಿ ಅಧ್ಯಕ್ಷ ಬಿ. ಡಿ. ಮಂಜುನಾಥ್, ಸಹಕಾರ ಭಾರತಿ ರಾಜ್ಯ ಉಪಾಧ್ಯಕ್ಷ ರವಿ ಬಸಪ್ಪ, ಮಹಿಳಾ ಘಟಕದ ಸಂಘಟನಾ ಕಾರ್ಯದರ್ಶಿ ಬೀನಾ ಬೊಳ್ಳಮ್ಮ, ಸಹಕಾರ ಭಾರತಿ ಕೊಡಗು ಜಿಲ್ಲಾಧ್ಯಕ್ಷ ನಾಪಂಡ ಉಮೇಶ್ ಉತ್ತಪ್ಪ ಭಾಗವಹಿಸಲಿರುವುದಾಗಿ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕನ್ನಂಡ ಸಂಪತ್ ಅವರು ತಿಳಿಸಿದ್ದಾರೆ.