ಸರ್ವಿಸ್ ರಿವಾಲ್ವರ್‌ನಿಂದ ಪತ್ನಿ, ಮಗ, ಸಾಕು ನಾಯಿಯನ್ನು ಕೊಂದ ಪೊಲೀಸ್‌ ಅಧಿಕಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಸರ್ವಿಸ್ ರಿವಾಲ್ವರ್‌ನಿಂದ ಪತ್ನಿ, ಮಗ ಹಾಗೂ ಸಾಕು ನಾಯಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ಅಮೃತಸರ ಮೂಲದ ಎಎಸ್‌ಐ ಭೂಪಿಂದರ್ ಸಿಂಗ್ ತನ್ನ ಸರ್ವಿಸ್ ರಿವಾಲ್ವರ್‌ನಿಂದ ಪತ್ನಿ ಬಲ್ಜೀತ್ ಕೌರ್ (40) ಮತ್ತು ಮಗ ಲವ್‌ಪ್ರೀತ್ ಸಿಂಗ್ (19) ಅವರನ್ನು ಕೊಲೆ ಮಾಡಿದ್ದಾರೆ.

ಅಷ್ಟೇ ಅಲ್ಲದೆ ತನ್ನ ಮುದ್ದಿನ ನಾಯಿಗೂ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಕೆಲವು ಗಂಟೆಗಳ ನಂತರ ಭೂಪಿಂದರ್ ಸಿಂಗ್ ಗುಂಡು ಹಾರಿಸಿಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಂಗ್ ಅವರ ದುಷ್ಕೃತ್ಯದ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಗುರುದಾಸ್‌ಪುರ ಪೊಲೀಸರು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಗುರುದಾಸ್‌ಪುರ ಕೆಲವು ಆರೋಪಿಗಳು ಬಬ್ಲಿ ಗ್ರಾಮದ ಯುವತಿಯನ್ನು ಕಿಡ್ನಾಪ್ ಮಾಡಿದ್ದು, ಆಕೆ ಕೃತ್ಯ ಎಸಗುವುದನ್ನು ನೋಡಿದ್ದರು ಎಂದು ತಿಳಿದು ಬಂದಿದೆ. ಪೊಲೀಸರು ಬಾಲಕಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದು, ವೈದ್ಯಕೀಯ ಪರೀಕ್ಷೆಗಾಗಿ ಆಕೆಯನ್ನು ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಗ್ರಾಮದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸುತ್ತಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!