spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮುಂಬೈ ಬಹುಮಹಡಿ ಕಟ್ಟಡ ಅಗ್ನಿ ಅವಘಡ ಪ್ರಕರಣ: ಮಾಲೀಕನ ವಿರುದ್ಧ ಎಫ್’ಐಆರ್ ದಾಖಲು

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ವಾಣಿಜ್ಯ ನಗರಿ ಮುಂಬೈನಲ್ಲಿ 61 ಅಂತಸ್ತಿನ  ಕಟ್ಟಡದಲ್ಲಿ ಸಂಭವಿಸಿದ್ದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಇಂದು ಮುಂಬೈ ಪೊಲೀಸರು ವಸತಿ ಕಟ್ಟಡ ಮಾಲೀಕನ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

ಸೆಂಟ್ರಲ್ ಮುಂಬೈನ ಕರ್ರಿ ರಸ್ತೆಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕರನ ಮೇಲೆ ಎಫ್ ಐಆರ್ ರಿಜಿಸ್ಟರ್ ಮಾಡಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ನಿನ್ನೆ ಮಧ್ಯಾಹ್ನ ಕಟ್ಟಡದ 19 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು, ಈ ವೇಳೆ ಬೆಂಕಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ 30 ವರ್ಷದ ಭದ್ರತಾ ಸಿಬ್ಬಂದಿ ಅರುಣ್ ತಿವಾರಿ ಎಂಬುವವರು ಬಾಲ್ಕನಿಯಿಂದ ಬಿದ್ದು ಮೃತಪಟ್ಟಿದ್ದರು.

ವಸತಿ ಸಮ್ಮುಚ್ಛಯದ ಮಾಲೀಕರು, ಅಲ್ಲಿನ ನಿವಾಸಿಗಳು, ಅಗ್ನಿ ಸುರಕ್ಷತೆ ನಿರ್ವಹಣೆಯ ಗುತ್ತಿಗೆದಾರ ಮತ್ತು ಇತರರ ವಿರುದ್ಧ ಕಲಾಚೌಕಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss