ಕಾಪಿರೈಟ್‌ ಕೇಸ್: ಕಾನೂನು ಹೋರಾಟ ಎಂದು ಪತ್ರ ಬರೆದ ರಕ್ಷಿತ್‌ ಶೆಟ್ಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಸ್ಯಾಂಡಲ್‌ವುಟ್‌ ನಟ ರಕ್ಷಿತ್‌ ಶೆಟ್ಟಿ ವಿರುದ್ಧ ಕಾಪಿರೈಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಬಳಸಿದ ‘ಒಮ್ಮೆ ನಿನ್ನನ್ನು ಹಾಗೂ ನ್ಯಾಯ ಎಲ್ಲಿದೆ’ ಎಂಬ ಹಾಡುಗಳ ಕಾಪಿರೈಟ್‌ ವಿಚಾರಕ್ಕೆ ಸಂಬಂಧಿಸಿದಂತೆ ಕೇಸ್‌ ದಾಖಲಾಗಿದೆ. ಇದರ ಬೆನ್ನಲ್ಲೇ, ರಕ್ಷಿತ್‌ ಶೆಟ್ಟಿ ಒಡೆತನದ ಪರಂವಃ ಸ್ಟುಡಿಯೋಸ್‌ನಿಂದ ಸುದೀರ್ಘ ಪತ್ರ ಬರೆದಿದ್ದು, ಕಾನೂನು ಹೋರಾಟ ಮಾಡುವುದಾಗಿ ಘೋಷಿಸಲಾಗಿದೆ.

‘ನಾವು ಈ ಬಹಿರಂಗ ಪತ್ರವನ್ನು ಎಂಆರ್‌ಟಿ ಮ್ಯೂಸಿಕ್ ಸಂಸ್ಥೆ ನಮ್ಮ ಮೇಲೆ ಎರಡು ಹಾಡಿನ ಹಕ್ಕು ಉಲ್ಲಂಘನೆಯ ಆರೋಪ ಮಾಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಲು ಬರೆದಿರುತ್ತೇವೆ. ಮೊದಲಿಗೆ ಸ್ಪಷ್ಟಿಕರಿಸಲು, ಚಿತ್ರದಲ್ಲಿ ಬಳಕೆಯಾಗಿರುವ ತುಣುಕುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ಕಾರಣ, ಚಿತ್ರದಲ್ಲಿ ಈ ಹಾಡುಗಳು ಯಾವ ಭಾಗದಲ್ಲಿ, ಯಾವ ರೀತಿಯಲ್ಲಿ ಬಳಕೆಯಾಗಿದೆ ಎಂದು. ಅಲ್ಲದೆ, ಬಳಕೆಯ ರೂಪವನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇವೆ’ ಎಂಬುದಾಗಿ ಪತ್ರವನ್ನು ಹಂಚಿಕೊಳ್ಳಲಾಗಿದೆ.

‘“ಈ ಮುಂಚೆ, ಅಂದರೆ, ಬ್ಯಾಚುಲರ್ ಪಾರ್ಟಿ ಸಿನಿಮ ತೆರೆಕಾಣುವುದಕ್ಕೂ ಮುನ್ನವೆ ನಾವು ಎಂ ಆರ್ ಟಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ಈ ಕುರಿತು ಮಾತು ಕತೆ ನಡೆಸಿದ್ದೆವು. ಆದರೆ ಅವರು ನಮ್ಮ ಮುಂದೆ ಇಟ್ಟ ಶುಲ್ಕ, ನಮ್ಮ ಬಜೆಟ್‌ ಅನ್ನು ಮೀರಿತ್ತು. ಎಂ ಆರ್ ಟಿ ಸಂಸ್ಥೆ ಶುಲ್ಕದ ಕುರಿತಾಗಿ ಮರು ಮಾತುಕತೆಗೆ ತಯಾರಿರರಿಲ್ಲ. ಈಗ ನಮ್ಮ ಮೇಲೆ ಹಾಡಿನ ಉಲ್ಲಂಘನೆಯ ಆರೋಪ ಬಂದಿದ್ದು, ಎಫ್ ಐ ಆರ್ ದಾಖಲಾಗಿದೆ. ಇದು ನಿಜವಾಗಿಯು ಹಾಡಿನ ಹಕ್ಕು ಉಲ್ಲಂಘನೆಯೆ? ಹೌದಾಗಿದ್ದೇ ಆದಲ್ಲಿ, ನಾವು ತರಬೇಕಾದ ದಂಡವಾದರೂ ಎಷ್ಟು? ಏಕೆಂದರೆ ಎಂ ಆರ್ ಟಿ ಸಂಸ್ಥೆಯಿಂದ ಕೇಳಲ್ಪಟ್ಟದ್ದು ಬೃಹತ್ ಮೊತ್ತ ಎಂದರೆ ತಪ್ಪಾಗಲಾರದು. ಅಲ್ಲವಾದರೆ, ಈ ತರಹದ ಆರೋಪವನ್ನು ಈಗಾಗಲಿ ಅಥವಾ ಮುಂಬರುವ ದಿನಗಳಲ್ಲಾಗಲಿ ಹೇಗೆ ಸಹಿಸಿಕೊಳ್ಳುವುದು! ಇದೊಂದು ಯಕ್ಷ ಪ್ರಶ್ನೆ! ಇದಕ್ಕೆ ಉತ್ತರ ನಾವು ಹುಡುಕ ಬಯಸುತ್ತೇವೆ’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

https://x.com/ParamvahStudios/status/1812843360702652590?ref_src=twsrc%5Etfw%7Ctwcamp%5Etweetembed%7Ctwterm%5E1812843360702652590%7Ctwgr%5E98744f6e827bfa04ecc71ea961b177e4af2a0727%7Ctwcon%5Es1_&ref_url=https%3A%2F%2Fvistaranews.com%2Fvistara%2Fbachelor-party-kannada-movie-copyright-row-rakshit-shettys-paramvah-studios-ready-to-legal-fight%2F695213.html

‘ನ್ಯಾಯ ಮತ್ತು ಪ್ರಭುದ್ಧತೆಯನ್ನು ಕಾಪಾಡಿಕೊಳ್ಳಲು ನಾವು ಇದನ್ನು ನ್ಯಾಯಸ್ಥಾನದಲ್ಲಿಯೇ ನಿರ್ಧಾರವಾಗಿಲಿ ಎಂದು ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ. ಇದರಿಂದ ಇನ್ನು ಮುಂಬರುವ ದಿನಗಳಲ್ಲಿ, ನಮಗಷ್ಟೇ ಅಲ್ಲ, ಬೇರೆ ಇನ್ಯಾವ ಸಿಸಿಮಾ ಕರ್ಮಿಗೂ ಈ ಪರಿಸ್ಥಿತಿ ಹಾಗೂ ಗೊಂದಲ ಎದುರಾಗಬಾರದೆಂದು, ನಮ್ಮ ಈ ಪ್ರಾಮಾಣಿಕ ಪ್ರಯತ್ನ’ ಎಂದು ಪರಂವಃ ಸ್ಟುಡಿಯೋಸ್‌ ಪತ್ರದ ಮೂಲಕ ತಿಳಿಸಿದೆ.

ಹಾಗೆಯೇ, ಸಿನಿಮಾದಲ್ಲಿ ಬಳಸಲಾದ ಎರಡು ಹಾಡುಗಳ ವಿಡಿಯೊವನ್ನು ಕೂಡ ಹಂಚಿಕೊಳ್ಳಲಾಗಿದೆ.

ಏನಿದು ಪ್ರಕರಣ?
ʻನ್ಯಾಯ ಎಲ್ಲಿದೆʼ ಟೈಟಲ್ ಸಾಂಗ್ ಹಾಗೂ ‘ಒಮ್ಮೆ ನಿನ್ನನ್ನೂ ಕಣ್ತುಂಬ ನೋಡುವಾಸೆ” ಹಾಡುಗಳನ್ನು ಕದ್ದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಹಿಂದೆ ನವೀನ್ ಕುಮಾರ್ ಎಂಬುವವರ ಜತೆ ಹಾಡುಗಳ ಬಗ್ಗೆ ಮಾತುಕತೆ ನಡೆದಿತ್ತು. ನವೀನ್ ಕುಮಾರ್ ಹಾಡುಗಳ ಕಾಪಿರೈಟ್ ಪಡೆದು ಮಾರಾಟ ಮಾಡುವ ಬ್ಯುಸಿನೆಸ್ ಮೆನ್ ಆಗಿದ್ದರು. ಇವರ ಜತೆ ಹಾಡಿಗೆ ಸಂಬಂಧಿಸಿದ ಮಾತುಕತೆ ನಡೆದಿತ್ತು. ಆದರೆ ನಾನಾ ಕಾರಣಕ್ಕೆ ಈ ಡೀಲ್ ಮುರಿದು ಬಿದ್ದಿತ್ತು. ಆದರೂ ಆ ಹಾಡನ್ನು ಮಾಲೀಕರ ಅನುಮತಿ ಇಲ್ಲದೆ ಬಳಕೆ ಆಗಿತ್ತು. ಚಿತ್ರದಲ್ಲಿ ಎರಡೂ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಮಾಡಿದ್ದಾರೆಂದು ನವೀನ್‌ರಿಂದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!