ಕೋರೆಕಲ್ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಬೆಳೆ ಹಾನಿ ವೀಕ್ಷಿಸಿದ ಸಚಿವ ಪ್ರಭು ಚೌಹಾಣ್

ಹೊಸ ದಿಗಂತ ವರದಿ, ಬೀದರ:

ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚೌಹಾಣ್ ಅವರು  ಔರಾದ(ಬಿ) ವಿಧಾನಸಭಾ ಕ್ಷೇತ್ರದ ಕೋರೆಕಲ್, ಹೆಡಗಾಪೂರ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅಕಾಲಿಕ ಮಳೆಯಿಂದಾಗಿ ಉಂಟಾಗಿರುವ ಬೆಳೆ ಹಾನಿಯನ್ನು ವೀಕ್ಷಿಸಿ ರೈತರ ಸಮಸ್ಯೆಗಳನ್ನು ಆಲಿಸಿದರು.

ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವರು, ಹಾನಿ ಪ್ರಮಾಣದ ಬಗ್ಗೆ ರೈತರಿಂದ ಮಾಹಿತಿ ಪಡೆದರು. ಜಂಟಿ ಸಮೀಕ್ಷೆ ನಡೆಸುವಂತೆ ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ರೈತರು ಆತಂಕಪಡಬಾರದು. ಬೆಳೆಹಾನಿಯಾದ ರೈತರಿಗೆ ಸರ್ಕಾರದಿಂದ ಅಗತ್ಯ ಪರಿಹಾರ ಬಿಡುಗಡೆ ಮಾಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಆಲಿಕಲ್ಲು ಸಮೇತ ಸುರಿದ ಭಾರೀ ಮಳೆಯಿಂದ ಹಲವೆಡೆ ಜೋಳ, ಕುಸುಬೆ, ಟೊಮ್ಯಾಟೊ, ಈರುಳ್ಳಿ, ಮೆಣಸಿನ ಕಾಯಿ ಹೀಗೆ ಸಾಕಷ್ಟು ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ನಷ್ಟವಾಗಿವೆ. ಅಧಿಕಾರಿಗಳು ಬೆಳೆಹಾನಿಯಾದ ಹೊಲಗಳಿಗೆ ಭೇಟಿ ನೀಡಿ ನಿಖರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭ  ಕಮಲಗರ ತಹಸೀಲ್ದಾರರಾದ ಮಲ್ಲಿಕಾರ್ಜುನ, ಕೆ.ನಾಗರಾಜ, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಶ್ರೀಮಂತ ಪಾಟೀಲ, ರಾಜಕುಮಾರ ಸೋರಳ್ಳೆ, ಶಿವಲಿಂಗ ಚಿಟ್ಟಾ, ಮನೋಹರ ಹೂಗಾರ, ಬಸವರಾಜ ಹಲ್ಬುರ್ಗೆ, ರಾಜಪ್ಪ ಯರನಾಳೆ, ವಿಜಯಕುಮಾರ,  ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!