Sunday, October 1, 2023

Latest Posts

ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ವಿಧಾನಸಭೆ ಚುನಾವಣೆಯ ಬಳಿಕ ಮೊದಲ ಬಾರಿಗೆ ಬಿಜೆಪಿ ಕಚೇರಿಯಲ್ಲಿ ಇಂದು ಪಕ್ಷದ ಪ್ರಮುಖ ನಾಯಕರ ಸಮಿತಿ (ಕೋರ್ ಕಮಿಟಿ) ಸಭೆ ಆರಂಭಗೊಂಡಿದೆ.

ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆ ಸೇರಿದಂತೆ ಬಿಬಿಎಂಪಿ ಚುನಾವಣೆ ತಯಾರಿ, ಸರ್ಕಾರ ವಿರುದ್ಧ ಹೋರಾಟ, ಲೋಕಸಭೆ ಚುನಾವಣಾ ಆಪರೇಷನ್ ಹಸ್ತ ವಿಫಲಗೊಳಿಸುವುದು ಮತ್ತು ಕಾವೇರಿ ವಿಚಾರದಲ್ಲಿ ಹೋರಾಟ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.

ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯದ ಮಾಜಿ ಸಚಿವರಾದ ಗೋವಿಂದ ಕಾರಜೋಳ, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಡಾ|| ಸಿ.ಎನ್. ಅಶ್ವತ್ಥನಾರಾಯಣ, ಬಿ. ಶ್ರೀರಾಮುಲು, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ ಅವರು ಪಾಲ್ಗೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!